ದೈವಾರಾಧಾನೆ ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸ ಮಾಡಬೇಕು: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ

ಉಡುಪಿ: ಪಾಣರ ಸಮಾಜದವರು ದೈವಾರಾಧಾನೆಯನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸ ಮಾಡಬೇಕು ಎಂದು ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ರು. ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಉಡುಪಿ ಕೃಷ್ಣಮಠ ಪರ್ಯಾಯ ಕೃಷ್ಣಾಪುರ ಮಠದ ಸಹಕಾರದೊಂದಿಗೆ ನಗರದ ರಾಜಾಂಗಣದಲ್ಲಿ ಇಂದು ಆಯೋಜಿಸಿದ ಜಿಲ್ಲಾ ಪಾಣರ ಸಂಘದ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶದಲ್ಲಿ ಸಮಾಜದ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು. ಈ ಸಮಾಜದ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು. […]