ಜ. 22 ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜನವರಿ 22 ರಂದು ಶಾಲೆಗಳಿಗೆ ರಜೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ನಾವು ಜನವರಿ 22 ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. (ಬೆಂಗಳೂರು) ನಗರ ಅಥವಾ ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಂಟಾದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಕರೆ ನೀಡುತ್ತಾರೆ” ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿರುವುದಾಗಿ ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಹೇಳಿದೆ. ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ […]
ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್, ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು. ಕೈಗಳಲ್ಲಿ […]
ಶಿಕ್ಷಕರ ಅರ್ಹತಾ ಪರೀಕ್ಷೆ-2022 ಕೀ ಉತ್ತರ ಪ್ರಕಟಣೆ: ನ. 17ರ ವರೆಗೆ ಆಕ್ಷೇಪಣೆಗೆ ಅವಕಾಶ
ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ-2022) ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಕೀ ಉತ್ತರಗಳಿಗೆ ನವೆಂಬರ್ 17ರ ಸಂಜೆ 5.30ರ ವರೆಗೆ ಆಕ್ಷೇಪ ಸಲ್ಲಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮರು ಸೇರ್ಪಡೆ
ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಅಳವಡಿಸಿದ್ದು, ಅದರ ಬದಲು ಸಮಾಜ ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ಸಚಿವ ಸುನಿಲ್ ಕುಮಾರ್ ಅವರ ಕೋರಿಕೆಯ ಹಿನ್ನೆಲೆಯಲ್ಲಿ ಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲು ಸರ್ಕಾರಿ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸರಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಬಿಲ್ಲವ ಸಮಾಜವು ಅಧಿಕೃತ ಆದೇಶ ಬಂದ ಕೂಡಲೇ ಈಗಾಗಲೇ ಕರೆ […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರದ್ದೇ ಮೇಲುಗೈ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಯಥಾಪ್ರಕಾರ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಉತ್ತೀರ್ಣ ಪ್ರಮಾಣ ಬಾಲಕಿಯರದ್ದು ಶೇ.68.72 ಆಗಿದ್ದರೆ, ಶೇ.55.22 ಬಾಲಕರು ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ದ್ವಿತೀಯ ಪಿಯು ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ http://karresults.nic.In ನೋಡಬಹುದು.