ಸರ್ಕಾರಿ ಪ.ಪೂ ಕಾಲೇಜುಗಳಲ್ಲಿ ಬಂಪರ್ ದಾಖಲಾತಿ: ಪಾಳಿಯಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಿದ ಸರಕಾರ
ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಪಾಳಿಯ ಆಧಾರದ ಮೇಲೆ ಕಾರ್ಯನಿರ್ವಹಿಸಲಿವೆ ಎಂದು ಪ.ಪೂ ಶಿಕ್ಷಣ ಇಲಾಖೆಯು ತಿಳಿಸಿದೆ. ತನ್ನ ಪ.ಪೂ ಕಾಲೇಜುಗಳಲ್ಲಿ ಪ್ರವೇಶಾತಿಗಿರುವ ಬೇಡಿಕೆಯನ್ನು ಪರಿಗಣಿಸಿ, ಸರ್ಕಾರವು ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಿದೆ. ಆದಾಗ್ಯೂ, ಈ ವ್ಯವಸ್ಥೆಯು ಹೆಚ್ಚಿನ ಸಂಖ್ಯೆಯ ಪ್ರವೇಶಾತಿಗಳಿರುವ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಸಂಖ್ಯೆ ಎಷ್ಟಿದ್ದರೂ ಸರ್ಕಾರಿ ಪ.ಪೂ ಕಾಲೇಜುಗಳು ಯಾವುದೇ ವಿದ್ಯಾರ್ಥಿಯ ಪ್ರವೇಶವನ್ನು ನಿರಾಕರಿಸುವಂತಿಲ್ಲ. ತರಗತಿಗಳು ಪಾಳಿಯಲ್ಲಿ ನಡೆಯುವುದನ್ನು ದೃಢಪಡಿಸಿದ ಪ್ರಾಥಮಿಕ ಮತ್ತು ಪ್ರೌಢ […]
ರಾಜ್ಯದೆಲ್ಲೆಡೆ ಶಾಲೆಗಳ ಪುನರಾರಂಭ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಖಾದ್ಯದ ಸ್ವಾಗತ
ಬೆಂಗಳೂರು: ರಾಜ್ಯದೆಲ್ಲೆಡೆ ಶಾಲೆಗಳ ಪುನರಾರಂಭದ ದಿನದಂದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ಖಾದ್ಯ ನೀಡಿ ಸ್ವಾಗತಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಶಾಲೆಯ ಮೊದಲ ದಿನದ ಮಧ್ಯಾಹ್ನದ ಊಟದ ಜೊತೆಗೆ ಕನಿಷ್ಠ ಒಂದು ಸಿಹಿ ಖಾದ್ಯವನ್ನು ತಯಾರಿಸುವಂತೆ ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸುತ್ತೋಲೆಯ ಪ್ರಕಾರ, ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗಳು ಶಾಲಾ ಪುನರಾರಂಭದ ಮೊದಲ ದಿನದಿಂದಲೆ ಕಾರ್ಯನಿರ್ವಹಿಸಲಿವೆ. ಸಿಹಿ ಖಾದ್ಯದ ಜತೆಗೆ ಶಾಲೆಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಮೂಡಿಸುವಂತೆ […]
ಏರುತ್ತಿರುವ ತಾಪಮಾನ: ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲವೆಂದ ಶಿಕ್ಷಣ ಸಚಿವ
ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ತಾಪಮಾನವು ದಿನೇ ದಿನೇ ಏರುತ್ತಿದ್ದು, ಅದಾಗ್ಯೂ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವರ್ಷದ ಆರಂಭವನ್ನು ಮುಂದೂಡುವ ಬಗ್ಗೆ ಪರಿಗಣಿಸುವಂತೆ ವಿಧಾನ ಪರಿಷತ್ತಿನ ಕೆಲವು ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕೋರಿದ್ದಾರೆ. “ಸರ್ಕಾರದ ಮುಂದೆ ಅಂತಹ ಯಾವುದೇ […]