ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಗಳ ಸ್ಪಂದನೆಗೆ ಉಚಿತ ಸಹಾಯವಾಣಿ: ಎಸ್.ಸುರೇಶ್ ಕುಮಾರ್

ಉಡುಪಿ: ಶಿಕ್ಷಣ ಇಲಾಖೆಯಲ್ಲಿನ ಕುಂದು ಕೊರತೆ ಮತ್ತು ಸಮಸ್ಯೆಗಳನ್ನು ಆಲಿಸಲು ಮಾರ್ಚ್ 31 ರಂದು 24×7 ಉಚಿತ ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಅವರು ಸೋಮವಾರ, ಉಡುಪಿ ಜಿಲ್ಲೆಯ ಮಣೂರು-ಪಡುಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ಆಗಬೇಕಾಗಿರುವ ಸುಧಾರಣೆಗಳು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶಿಕ್ಷಕರು, ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು ಈ […]