ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕಾನೂನು ತಕ್ಷಣ ಬದಲಾಯಿಸಲು ಸಾಧ್ಯವಿಲ್ಲ: ಮಧು ಬಂಗಾರಪ್ಪ
ಬೆಂಗಳೂರು: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಸಿಂಧುತ್ವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ನಡುವೆ, ಹೊಸದಾಗಿ ನೇಮಕಗೊಂಡ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತರಗತಿಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರವು ತಕ್ಷಣವೇ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದ ಭಾಗವಾಗಿ ಹಿಜಾಬ್ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ ಬಂಗಾರಪ್ಪ, “ಹಿಜಾಬ್‌ನಲ್ಲಿನ […]
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಬೇಡಿಕೆ ಸಲ್ಲಿಸಿದ ಕುಪ್ಮಾ ಆಡಳಿತ ಮಂಡಳಿ ಪದಾಧಿಕಾರಿಗಳು
ಬೆಂಗಳೂರು: ಕರ್ನಾಟಕ ರಾಜ್ಯ ಖಾಸಗಿ ಅನುದಾನ ರಹಿತ ಪ.ಪೂ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಮಾಡಬೇಕಾದ ಕೆಲವು ಬದಲಾವಣೆಗಳು ಹಾಗೂ ಇನಿತರ ವಿಷಯಗಳ ಕುರಿತಂತೆ ಬೆಂಗಳೂರಿನ ಸಮಗ್ರ ಶಿಕ್ಷಣದ ಸಭಾಂಗಣದಲ್ಲಿ ಸುದೀರ್ಘ ಚರ್ಚೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧೂ ರೂಪೇಶ್, ಹೆಚ್ಚುವರಿ ಕಾರ್ಯದರ್ಶಿ ಚಂದ್ರಶೇಖರ್, ಪಪೂ ಶಿಕ್ಷಣಾ ಇಲಾಖೆಜಂಟಿ […]
ರಾಜ್ಯಾದ್ಯಂತದ ಅಂಗನವಾಡಿಗಳಲ್ಲಿ ಮೊದಲನೆ ಹಂತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ
ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರವು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ 26 ಸ್ಥಾನಮಾನ ಪತ್ರಗಳನ್ನು ಸಲ್ಲಿಸಿದೆ. ವಸತಿ ಸಚಿವ ವಿ ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಈ ವಿಷಯ ಪ್ರಕಟಿಸಿದ್ದಾರೆ. “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಿದ್ದು, ಮೊದಲ ಹಂತದಲ್ಲಿ ರಾಜ್ಯಾದ್ಯಂತದ ಅಂಗನವಾಡಿಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಮುಂದಿನ ಹಂತದಲ್ಲಿ ಎನ್‌ಇಪಿ ಅನ್ನು ಪ್ರಾಥಮಿಕ […]
ಶಾಲಾ ಪಠ್ಯ ಪುಸ್ತಕಗಳ ಕೇಸರೀಕರಣ ವಿವಾದ: ಮಕ್ಕಳಿಗೆ ‘ನೈಜ ಇತಿಹಾಸ’ ಕಲಿಸುತ್ತೇವೆ ಎಂದ ಶಿಕ್ಷಣ ಸಚಿವ
ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ವಿವಾದಾತ್ಮಕ ಪರಿಷ್ಕರಣೆ ಕುರಿತು ಮೌನ ಮುರಿದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ “ನೈಜ” ಇತಿಹಾಸವನ್ನು ಕಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣವನ್ನು ಕೇಸರಿಕರಣಗೊಳಿಸುವ ಆರೋಪವನ್ನು ತಳ್ಳಿಹಾಕಿದ ಅವರು, “ಕೆಲವು ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಪರಿಷ್ಕೃತ ಪಠ್ಯಪುಸ್ತಕಗಳನ್ನು ನೋಡದೆಯೆ ಜಾತಿ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ. ಬರಗೂರು ರಾಮಚಂದ್ರಪ್ಪ ನೇತೃತ್ವದ ಹಿಂದಿನ ಸಮಿತಿಯು ಪರಿಷ್ಕರಿಸಿದ ಪಠ್ಯಪುಸ್ತಕಗಳು ಸುಳ್ಳು ಮತ್ತು ತಪ್ಪು […]
ಮೇ-19 ಮಧ್ಯಾಹ್ನ 12.30ಕ್ಕೆ ಹತ್ತನೇ ತರಗತಿ ಫಲಿತಾಂಶ ಪ್ರಕಟ
ಬೆಂಗಳೂರು: ಮೇ-19 ರಂದು ಮಧ್ಯಾಹ್ನ 12.30ಕ್ಕೆ ಹತ್ತನೆ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’. ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ […]