ಎಂಟು ವರ್ಷಗಳ ಹಿಂದೆ ಎಟಿಎಂನಲ್ಲಿ ಮಹಿಳೆಯ ಮೇಲೆ ಮಚ್ಚಿನಿಂದ ಹಲ್ಲೆ ಪ್ರಕರಣ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ
ಬೆಂಗಳೂರು: ಕಳೆದ 8 ವರ್ಷಗಳ ಹಿಂದೆ ಬೆಂಗಳೂರಿನ ಕಾರ್ಪೊರೇಷನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿ ಮಧುಕರ್ ರೆಡ್ಡಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಸೋಮವಾರ 65ನೇ ಸೆಷನ್ಸ್ ನ್ಯಾಯಾಲಯ ಮಧುಕರ ರೆಡ್ಡಿ ದೋಷಿ ಎಂದು ಹೇಳಿ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಈ ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾ. ರಾಜೇಶ್ವರ ಅವರು, ಆರೋಪಿಯ ವಿರುದ್ಧ ತನಿಖಾಧಿಕಾರಿಗಳು ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು […]