ಸಾಣೂರು ಗ್ರಾಮದಲ್ಲಿ ಬೆಂಕಿ ಆಕಸ್ಮಿಕ; ಗಾಯಾಳು ವೃದ್ಧೆ ಸಾವು
ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸಾಣೂರು ಗ್ರಾಮದ ನಿವಾಸಿ 71 ವರ್ಷದ ಸುಮತಿ ಶೆಟ್ಟಿ ಮೃತ ದುರ್ದೈವಿ. ಇವರು ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ […]