ಬ್ರಹ್ಮಾವರ: ಮತದಾನದ ಕರ್ತವ್ಯ ಪೂರೈಸಿ ಇಹಲೋಕ ತ್ಯಜಿಸಿದ ಹಿರಿ ಜೀವ
ಬ್ರಹ್ಮಾವರ: ವಯೋವೃದ್ದರಾಗಿದ್ದ ಹಿರಿ ಜೀವವೊಂದು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು ಗುರುತಿಸಲಾಗಿದೆ. ಚುನಾವಣಾ ಆಯೋಗವು ದಿವ್ಯಾಂಗ ಹಾಗೂ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಅದಾಗಲೇ ಜಿಲ್ಲೆಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ಕೂಡಾ ಈ ಸೌಲಭ್ಯ ಬಳಸಿ ಮನೆಯಲ್ಲೆ ಮತದಾನ […]
ಕರ್ನಾಟಕ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಮತಾದರರ ನೋಂದಣಿ ನಿಯಮಗಳು
ಉಡುಪಿ: ಕರ್ನಾಟಕ ನೈರುತ್ಯ ಪದವೀಧರರ/ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಮತದಾರರ ನೋಂದಣಿ ನಿಯಮಗಳು ಈ ಕೆಳಗಿನಂತಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆಗೆ ಮತದಾರರ ನೋಂದಣಿ ನಿಯಮಗಳು 1960 ರ 31(4) ನೇ ನಿಯಮದ ಅನುಸಾರ ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಸಂಬಂಧಿಸಿದ ಶಿಕ್ಷಕರ ಮತ […]
ಪ್ರಚಾರಕ್ಕೆ ಕಿಚ್ಚು ಹಚ್ಚಿದ ಕಿಚ್ಚ ಸುದೀಪ್: ಮೊಳಕಾಲ್ಮೂರಿನಲ್ಲಿ ನಟನನ್ನು ನೋಡಲು ಮುಗಿ ಬಿದ್ದ ಜನ
ಮೊಳಕಾಲ್ಮೂರು: ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಅವರು ಬುಧವಾರ ಚಿತ್ರದುರ್ಗದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ತಿಪ್ಪೇಸ್ವಾಮಿ ಪರ ಪ್ರಚಾರ ನಡೆಸಿದರು. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಕಿಚ್ಚ ಸುದೀಪ್ ತಿಪ್ಪೇಸ್ವಾಮಿ ಮತ್ತು ಇತರ ಬಿಜೆಪಿ ನಾಯಕರೊಂದಿಗೆ ಟ್ರಕ್‌ನಲ್ಲಿ ನಿಂತು ಜನಸಮೂಹದತ್ತ ಕೈ ಬೀಸುತ್ತಿರುವುದು ಕಂಡುಬಂದಿದೆ. #WATCH | Kannada actor Kiccha Sudeep campaigns for Bharatiya Janata Party candidate from Molakalmuru Assembly constituency, S Thippeswamy, in […]
ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆ: 17 ಸ್ಥಾನ ಬಿಜೆಪಿ ತೆಕ್ಕೆಗೆ; ಬಹುಮತದ ಕೊರತೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸ್ಪಷ್ಟ ಬಹುಮತದ ಕೊರತೆ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಮತ ಎಣಿಕೆ ಮುಕ್ತಾಯವಾದೆ. 35 ವಾರ್ಡ್‌ಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಎಐಎಂಐಎಂ 2 ಮತ್ತು ಜೆಡಿಎಸ್ ಅಭ್ಯರ್ಥಿ 1 ವಾರ್ಡ್‌ನಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಲಾಯಿತು. ಉಳಿದ ಐದು ವಾರ್ಡ್‌ಗಳಲ್ಲಿ ಪಕ್ಷೇತರರು ಆಯ್ಕೆಯಾಗಿದ್ದಾರೆ. ಪಕ್ಷೇತರರ ಬೆಂಬಲದೊಂದಿಗೆ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು […]
‘ಒಂದು ಕುಟುಂಬ ಒಂದು ಟಿಕೆಟ್’ ಗೆ ಜೈ ಎಂದ ಕಾಂಗ್ರೆಸ್: ಚಿಂತನ ಶಿಬಿರದಲ್ಲಿ ಪಕ್ಷ ಪುನಶ್ಚೇತನದ ಮಂಥನ?
ಉದಯಪುರ: ಮೂರು ದಿನಗಳ ನವ ಸಂಕಲ್ಪ ಶಿಬಿರದ ಸಮಾರೋಪದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಭಾನುವಾರ ಉದಯಪುರದಲ್ಲಿ ‘ಒಂದು ಕುಟುಂಬ ಒಂದು ಟಿಕೆಟ್’ ಘೋಷಣೆಯನ್ನು ಅಂಗೀಕರಿಸಿತು. ಪಕ್ಷದ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಘೋಷಣೆಯನ್ನು ವಾಚಿಸಿದರು. ಘೋಷಣೆಯನ್ನು ಓದಿದ ಮಾಕನ್, ಕಾಂಗ್ರೆಸ್ ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ತಲುಪುತ್ತದೆ ಮತ್ತು ಮೈತ್ರಿಗೆ ಮುಕ್ತವಾಗಿದೆ ಎಂದು ಹೇಳಿದರು. ಪಕ್ಷ ಪುನಶ್ಚೇತನಕ್ಕಾಗಿ ಕಾಂಗ್ರೆಸ್ ಪಕ್ಷವು ಮೂರು ಹೊಸ ಇಲಾಖೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮೊದಲನೆಯದ್ದು ಸಾರ್ವಜನಿಕ ಒಳನೋಟ, ಎರಡನೆಯದ್ದು ಚುನಾವಣಾ ನಿರ್ವಹಣೆ ಮತ್ತು […]