ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ನೇಮಕ
ಹೊಸದಿಲ್ಲಿ: ಭಾರತದ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರು ಪಂಜಾಬ್ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗವು 3 ಆಯುಕ್ತರನ್ನು ಒಳಗೊಂಡ ಬಹು-ಸದಸ್ಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಅವರು ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರನ್ನು ಸೇರಿಕೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ […]
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗಿರುವ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಎಪಿಕ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಉಡುಪಿಯ ಬನ್ನಂಜೆಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು. ಚುನಾವಣೆಯಲ್ಲಿ ಮತ ಚಲಾಯಿಸಲು ಎಪಿಕ್ ಕಾರ್ಡ್ ಇದ್ದರೆ ಮಾತ್ರ ಸಾಲದು. […]
ಗುಜರಾತ್ ಚುನಾವಣೆ: ಡಿ. 1 ಮತ್ತು 5 ರಂದು ಮತದಾನ: ಡಿ. 8 ರಂದು ಮತ ಎಣಿಕೆ
ಅಹಮದಾಬಾದ್: ಗುಜರಾತಿನಲ್ಲಿ ಚುನಾವಣಾ ಕಣ ಸಜ್ಜಾಗಿದ್ದು, ಬಿರುಸಿನ ಪ್ರಚಾರಗಳಿಗೆ ತೆರೆಬಿದ್ದಿದ್ದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದೀಗ ಭಾರತೀಯ ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಘೋಷಣೆ ಮಾಡಿದೆ. ಇನ್ನೇನಿದ್ದರೂ ಮತದಾರ ಪ್ರಭುವಿನ ಮುದ್ರೆ ಒತ್ತುವಿಕೆ ಒಂದೇ ಬಾಕಿ ಉಳಿದಿದೆ. ಗುಜರಾತಿನ ಎಲ್ಲಾ 182 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ವಿಧಾನಸಭಾ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದ್ದು, ಎರಡನೇ ಹಂತ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8 ರಂದು […]
17 ವರ್ಷ ವಯಸ್ಸಿನವರು ಮತದಾರರ ಗುರುತಿನ ಚೀಟಿಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು: ಚುನಾವಣಾ ಆಯೋಗ
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಮತದಾರರ ನೋಂದಣಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. 17 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತದಾರರ ಗುರುತಿನ ಚೀಟಿಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಆಯೋಗ ಪ್ರಕಟಿಸಿದೆ. ಈ ಮೊದಲು, ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ನಾಗರಿಕರಿಗೆ ಜನವರಿ 1 ರಂದು 18 ವರ್ಷ ವಯಸ್ಸು ತುಂಬಬೇಕಾಗಿತ್ತು. ಈಗ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಯುವಕರು ಪ್ರತಿ ವರ್ಷ ನಾಲ್ಕು ಅವಕಾಶಗಳನ್ನು ಪಡೆಯುತ್ತಾರೆ. 17 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರಿಗಾಗಿ ಮೂರು ಅರ್ಹತಾ ದಿನಾಂಕಗಳನ್ನು ಉಲ್ಲೇಖಿಸಿ – […]