ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮದ ಎಚ್ಚರಿಕೆ

ಉಡುಪಿ: ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಿದಲ್ಲಿ ಅಂತಹ ಮುದ್ರಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಬುಧವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲಕರು, ಪ್ಲೆಕ್ಸ್ ಮುದ್ರಕರು ಮತ್ತು ಪ್ರತಿನಿಧಿಗಳೊಂದಿಗೆ ನಡೆದ ಸಭೆಯ […]