ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ […]

ಮತದಾನ ಜಾಗೃತಿ ಕುರಿತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಿರುಚಿತ್ರ ನಿರ್ಮಾಣ ಸ್ಪರ್ಧೆ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಅಂಗವಾಗಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾನ ಜಾಗೃತಿಯ ಕುರಿತ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಿರುಚಿತ್ರದ ಅವಧಿಯು 30 ಸೆಕೆಂಡ್‌ಗಳಿಂದ ಗರಿಷ್ಠ 1 ನಿಮಿಷದ ಒಳಗಿರಬೇಕು. ವಿಷಯವು ಮತದಾರರಿಗೆ ತಮ್ಮ ಮತದ ಬಗ್ಗೆ ಹಾಗೂ ಮತದಾನ ಮಾಡಲು ಅರಿವು ಮೂಡಿಸುವಂತಿರಬೇಕು. ವೀಡಿಯೋ ಹಾಗೂ ಧ್ವನಿ ಉತ್ತಮವಾಗಿರಬೇಕು ಹಾಗೂ ವಿಷಯಕ್ಕೆ ತಕ್ಕಂತೆ ವೇಷಭೂಷಣವಿರಬೇಕು. ಕಿರುಚಿತ್ರವು ರಾಜಕೀಯ ವ್ಯಕ್ತಿ, ಪಕ್ಷ, ಚಿಹ್ನೆ, ಅಭ್ಯರ್ಥಿಯ ಕುರಿತು ವಿಷಯ ಹಾಗೂ ದೃಶ್ಯವನ್ನು ಒಳಗೊಂಡಿರಬಾರದು. ಯಾವುದೇ […]

ವಿಧಾನಪರಿಷತ್‌ ಚುನಾವಣೆಯಲ್ಲಿ ಕ್ರೈಸ್ತರ ಅವಗಣನೆ ಸಮುದಾಯಕ್ಕೆ ಮಾಡಿದ ಅಪಮಾನ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡಿಯೋನ್‌ ಡಿʼಸೋಜಾ

ಉಡುಪಿ: ವಿಧಾನಪರಿಷತ್‌ ಚುನಾವಣೆಯಲ್ಲಿ ಕ್ರೈಸ್ತ ಅಭ್ಯರ್ಥಿಗೆ ಅವಕಾಶ ನೀಡದಿರುವ ಕಾಂಗ್ರೆಸ್‌ ಪಕ್ಷದ ನಿಲುವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡಿಯೋನ್‌ ಡಿʼಸೋಜಾ ಖಂಡಿಸಿದ್ದು ಇದು ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಆರೋಪಿಸಿದ್ದಾರೆ. ಐವನ್ ಡಿಸೋಜಾ ಅವರಂತಹ ನಾಯಕರ ಹೆಚ್ಚಿನ ಪ್ರಾತಿನಿಧ್ಯ ಮತ್ತು ಪಕ್ಷದ ಬದ್ಧತೆಯನ್ನು ಕೆಪಿಸಿಸಿ ಪದೇ ಪದೇ ಕಡೆಗಣಿಸುತ್ತಿದೆ. ಕ್ರಿಶ್ಚಿಯನ್ನರನ್ನು ಇತ್ತೀಚಿನ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಕೇಂದ್ರದವರೆಗಿನ ಚುನಾವಣೆಗಳಿಂದ ದೂರವಿರಿಸಿ ಅವರನ್ನು ದೃಢವಾದ ಮತ ಬ್ಯಾಂಕ್ ಎಂದು ಪರಿಗಣಿಸುವ ಕಾಂಗ್ರೆಸ್ ವಾಸ್ತವದಿಂದ ದೂರವಿದೆ. ಕ್ರಿಶ್ಚಿಯನ್ […]