ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂಡೋ-ಜರ್ಮನ್ ಶೈಕ್ಷಣಿಕ ಪಾಲುದಾರಿಕೆಯ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ
ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿಗುರುವಾರ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)ವನ್ನು ಉದ್ಘಾಟಿಸಲಾಯಿತು ಬೆಂಗಳೂರಿನ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಆಕಿಮ್ ಬುರ್ಕಾರ್ಟ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾಹೆ ಸಂಸ್ಥೆಯು ಶಿಕ್ಷಣ, ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಹೊಸ ಆವಿಷ್ಕಾರಗಳ ಕೇಂದ್ರವಾಗಿದೆ. ವೈದ್ಯಕೀಯ ಜ್ಞಾನವನ್ನು ಹೆಚ್ಚಿಸುವ ಬದ್ಧತೆಯೊಂದಿಗೆ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿದೆ. […]