ತಂತ್ರಜ್ಞಾನದ ಬಳಕೆಯ ಜತೆಗೆ ಸುರಕ್ಷತೆಗೂ ಒತ್ತು ನೀಡಿ- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ದೈನಂದಿನ ಕಾರ್ಯಗಳಲ್ಲಿ ತಂತ್ರಜ್ಞಾನದ ಬಳಕೆಯ ಜೊತೆಗೆ ಅವುಗಳ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡುವುದು ಅವಶ್ಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಉಡುಪಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸೈಬರ್ ಸೆಕ್ಯೂರಿಟಿ ಮತ್ತು ಇ- ಆಡಳಿತ ವಿಷಯಗಳ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಾಹಿತಿ ತಂತ್ರಜ್ಞಾನದ ಬಳಕೆ ದೈನಂದಿನ ಜೀವನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲವರು ಇದರ ದುರುಪಯೋಗ ಪಡಿಸಿಕೊಂಡು ದೇಶದ ಯಾವುದೋ ಮೂಲೆಯಲ್ಲಿ ಕುಳಿತು ಅಮಾಯಕರ ಬ್ಯಾಂಕ್ ಖಾತೆಗಳಿಗೆ ಖನ್ನಾ, ಇ-ಮೇಲ್ […]