ವಿಶ್ವಕರ್ಮ ಸಮುದಾಯಕ್ಕೆ ಅಧಿಕಾರ ಶಕ್ತಿ ಕೊಡಿ: ನೇರಂಬಳ್ಳಿ ರಮೇಶ್ ಆಚಾರ್ಯ ಆಗ್ರಹ

ಉಡುಪಿ: ವಿಶ್ವಕರ್ಮ ಸಮುದಾಯಕ್ಕೆ ಬಿಜೆಪಿ ಸರ್ಕಾರದಿಂದ ನಿರೀಕ್ಷಿತ ಅನುಕೂಲ ಸಿಕ್ಕಿಲ್ಲ. ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ವಿಶ್ವಕರ್ಮ ಸಮುದಾಯಕ್ಕೆ ವಿಶೇಷ ಆರ್ಥಿಕ ಘೋಷಿಸಿಲ್ಲ, ಸಾಲಮನ್ನಾ ಮಾಡುವ ವಿಚಾರದಲ್ಲೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾ ಮುಖಂಡ ನೇರಂಬಳ್ಳಿ ರಮೇಶ್ ಆಚಾರ್ಯ ಬೇಸರ ವ್ಯಕ್ತಪಡಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಿಂದುಳಿದ ವರ್ಗಗಳ ಪೈಕಿ ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷ ಕೆ.ಪಿ ನಂಜುಂಡಿ ಅವರಿಗೆ ವಿಶೇಷ ಸ್ಥಾನಮಾನ ಕೊಟ್ಟು ಎಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾಯಕರನ್ನಾಗಿ ಮಾಡುತ್ತೇನೆ. ವಿಶ್ವಕರ್ಮ […]