ಆದ್ಯತೆಯ ಮೇರೆಗೆ ಎಂಡೋ ಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಬಗೆಹರಿಸಿ: ಸಚಿವ ಅಂಗಾರ
ಉಡುಪಿ: ಜಿಲ್ಲೆಯಲ್ಲಿನ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುಧಾರಣೆ ಮತ್ತು ಪುರ್ನವಸತಿಗೆ ಸಂಬಧಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾರ್ಚ್ 2019 ರಿಂದ ಇದುವರೆಗೆ ಹೊಸದಾಗಿ ಗುರುತಿಸಲಾಗಿರುವ 110 ಮಂದಿ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಅನುಮೋದನೆ ನೀಡಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಸಚಿವರು, […]