ರಾಜ್ಯದಲ್ಲಿ ಪ್ರಸ್ತುತ ವಿದ್ಯುತ್ ಕೊರತೆ ಇಲ್ಲ; ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಪೂರೈಕೆ: ಕೆ.ಜೆ.ಜಾರ್ಜ್

ಉಡುಪಿ: ರಾಜ್ಯದಲ್ಲಿ ಪ್ರಸ್ತುತ ವಿದ್ಯುತ್ ಕೊರತೆ ಕಂಡುಬರುತ್ತಿಲ್ಲ. ವಾಣಿಜ್ಯ ಸೇರಿದಂತೆ ಕೈಗಾರಿಕಾ ಪ್ರದೇಶಗಳಿಗೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ದುರಸ್ಥಿ ಸೇರಿದಂತೆ ನಿರ್ವಹಣಾ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ವಿದ್ಯುತ್ ಸಂಪರ್ಕಗಳನ್ನು ಕಡಿತಗೊಳಿಸಲಾಗುತ್ತಿದೆ. ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಅವರು ಮಂಗಳವಾರ ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮೆಸ್ಕಾಂ ಹಾಗೂ ಕೆ.ಪಿ.ಸಿ.ಟಿ.ಎಲ್ ನ ಪ್ರಗತಿ ಪರೀಶಿಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಉತ್ಪಾದನೆಯಲ್ಲಿ ಕೊರತೆ ಇರುವ ಹಿನ್ನಲೆ ವಿದ್ಯುತ್‌ಚ್ಛಕ್ತಿಯನ್ನು […]