ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ವತಿಯಿಂದ ಎಂಜಿನಿಯರ್ಸ್ ದಿನಾಚರಣೆ

ಉಡುಪಿ: ಸರ್ ಎಂ.ವಿಶ್ವೇಶ್ವರಯ್ಯನವರು ಒಂದು ಶಕ್ತಿಯಾಗಿ ದೇಶ ಕಟ್ಟುವ ಕೆಲಸ ಮಾಡಿದ್ದಾರೆ. ಪ್ರಸ್ತುತ ಯುವ ಎಂಜಿನಿಯರ್‌ಗಳು ವಿಶ್ವೇಶ್ವರಯ್ಯಅವರನ್ನು ಆದರ್ಶವಾಗಿಟ್ಟುಕೊಂಡು ಪ್ರಾಮಾಣಿಕತೆ, ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮಾಂಡವಿ ಬಿಲ್ಡರ್ಸ್ ನ ವ್ಯವಸ್ಥಾಪಕ ನಿರ್ದೇಶಕ ಡಾ ಜೆರ್ರಿ ವಿನ್ಸೆಂಟ್ ಡಯಾಸ್ ಹೇಳಿದರು. ಅವರು ಗುರುವಾರ ಅಸೋಸಿಯೇಶನ್ ಆಫ್ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಉಡುಪಿವತಿಯಿಂದ ಮಾಂಡವಿ ಟ್ರೇಡ್ ಸೆಂಟರ್‌ನಲ್ಲಿ ನಡೆದ ಎಂಜಿನಿಯರ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ನಗರವನ್ನು ವ್ಯವಸ್ಥಿತ ರೀತಿಯಲ್ಲಿ ರೂಪಿಸಲು ನಿರ್ಮಾಣ ಕ್ಷೇತ್ರದ ಪಾತ್ರ ಬಹಳ ಮುಖ್ಯ. […]

ಬ್ರಹ್ಮಗಿರಿ ಲಯನ್ಸ್ ಕ್ಲಬ್ ವತಿಯಿಂದ ಇಂಜಿನಿಯರ್ ದಿನಾಚರಣೆ

ಉಡುಪಿ: ಬ್ರಹ್ಮಗಿರಿ ಲಯನ್ಸ್ ಕ್ಲಬ್ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯರನ್ನು ಗುರುವಾರದಂದು ಕಿದಿಯೂರು ಹೋಟೆಲ್ ನಲ್ಲಿ ಗೌರವಿಸಲಾಯಿತು. ಸುಮಾರು 39 ವರ್ಷಕ್ಕೂ ಹೆಚ್ಚಿನ ಕಾಲ ಸಿವಿಲ್ ಇಂಜಿನಿಯರ್ ವೃತ್ತಿಯಲ್ಲಿ ಸುಮಾರು 500 ಕ್ಕೂ ಹೆಚ್ಚು ಮನೆ ಹಾಗೂ ಕಟ್ಟಡಗಳನ್ನು ನಿರ್ಮಿಸಿದ ಇವರ ಸೇವೆ ಪರಿಗಣಿಸಿ ಶಾಲು ಹೊದಿಸಿ, ಪ್ರಶಸ್ತಿ ನೀಡಿ ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬ್ರಹ್ಮಗಿರಿ ಅಧ್ಯಕ್ಷ ಉಮೇಶ್ ನಾಯಕ್, ಕಿದಿಯೂರು ಹೋಟೆಲ್ ಮಾಲಕ ಭುವನೇಂದ್ರ ಕಿದಿಯೂರು […]

ಸೆಪ್ಟೆಂಬರ್ 15 ರಂದು ಎ.ಸಿ.ಸಿ.ಇ.ಎ ವತಿಯಿಂದ ಇಂಜಿನಿಯರ್ ಗಳ ದಿನಾಚರಣೆ

ಉಡುಪಿ: ಸಿವಿಲ್ ಇಂಜಿನಿಯರ್‌ ಸಲಹೆಗಾರ ಮತ್ತು ವಾಸ್ತುಶಿಲ್ಪಿಗಳ ಸಂಘದ ವತಿಯಿಂದ ಇಂಜಿನಿಯರ್ ಗಳ ದಿನ ಸೆಪ್ಟೆಂಬರ್ 15 ರಂದು ಸಂಜೆ 7 ಗಂಟೆಗೆ ಕಡಿಯಾಳಿಯಲ್ಲಿರುವ ಮಾಂಡವಿ ಟ್ರೇಡ್ ಸೆಂಟರಿನ ಮೂರನೇ ಮಹಡಿಯಲ್ಲಿ ಆಚರಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಸಿ.ಸಿ.ಇ.ಎಯ ಅಧ್ಯಕ್ಷ ಪಾಂಡುರಂಗ ಆಚಾರ್ ವಹಿಸಲಿದ್ದು, ದ.ಕ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಮಾಂಡವಿ ಬಿಲ್ಡರ್ಸ್ ಮತ್ತು ಡೆವೆಲಪರ್ಸ್ ನ ಎಂಡಿ ಡಾ.ಜೆರ್ರಿ ವಿನ್ಸೆಂಟ್ ಡೈಸ್ ಮತ್ತು ಸಂಘದ ಗೌರವಾಧ್ಯಕ್ಷ […]