ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಲಕ್ಷ್ಮಣ ಫಲ ಗಿಡ ವಿತರಣೆ: ಅತ್ಯುತ್ತಮವಾಗಿ ಪೋಷಿಸಿದ ಗಿಡಗಳಿಗೆ ಬಹುಮಾನ ಘೋಷಣೆ

ಉಡುಪಿ: ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಲಕ್ಷ್ಮಣ ಫಲವನ್ನು ಉಚಿತವಾಗಿ ನೀಡುವ ಕಾರ್ಯಕ್ರಮವನ್ನು ಗುರುವಾರದಂದು ಭುಜಂಗ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ , ಪರಿಸರ ದಿನವನ್ನು ಕೇವಲ ಒಂದು ದಿನದ ಮಟ್ಟಿಗೆ ಆಚರಿಸದೆ ವರ್ಷಪೂರ್ತಿ ಆಚರಿಸುವ ಕಾರ್ಯಕ್ಕೆ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದವರು ಮುಂದಾಗಿರುವುದು ಅತ್ಯುತ್ತಮ ವಿಚಾರ. ಜಿಲ್ಲೆಯಾದ್ಯಂತ 1000 ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸ ಸಂಘದ ವತಿಯಿಂದ ನಡೆಯುತ್ತಿರುವುದು ಅಭಿನಂದನಾರ್ಹ. ಗಿಡಗಳನ್ನು ನೆಡುವುದು […]

ಜುಲೈ 1 ರಿಂದ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಸಂಪೂರ್ಣ ನಿಷೇಧ: ಕಾನೂನು ಉಲ್ಲಂಘಿಸಿದಲ್ಲಿ ದಂಡ

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಪ್ಲೇಟ್, ಧ್ವಜ, ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನವದೆಹಲಿಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮದಂತೆ ಜುಲೈ 1 ರಿಂದ ಮೇಲ್ಕಂಡ ನಿಷೇಧಿತ ಉತ್ಪನ್ನಗಳ […]