ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ವೆಬ್‌ಸೈಟ್‌ನಲ್ಲಿ […]

ಕರಡು ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗಿರುವ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಎಪಿಕ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಉಡುಪಿಯ ಬನ್ನಂಜೆಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು. ಚುನಾವಣೆಯಲ್ಲಿ ಮತ ಚಲಾಯಿಸಲು ಎಪಿಕ್ ಕಾರ್ಡ್ ಇದ್ದರೆ ಮಾತ್ರ ಸಾಲದು. […]

ಸೆಪ್ಟಂಬರ್ 4 ಮತ್ತು 18ರಂದು ಆಧಾರ್-ಎಪಿಕ್ ಜೋಡಣೆ ನೋಂದಣಿ ದಿನ

ಉಡುಪಿ: ಅರ್ಹ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಲು ಸೆಪ್ಟಂಬರ್ 4 ಮತ್ತು 18 ನ್ನು ವಿಶೇಷ ನೋಂದಣಿ ದಿನಗಳನ್ನಾಗಿ ಆಯೋಜಿಸಲಾಗಿದ್ದು, ಈ ದಿನಗಳಂದು ಜಿಲ್ಲೆಯ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳಲ್ಲಿರುವ ಬಿ.ಎಲ್.ಓ ಅಧಿಕಾರಿಗಳನ್ನು ಸಂಪರ್ಕಿಸಿ, ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

17 ವರ್ಷ ವಯಸ್ಸಿನವರು ಮತದಾರರ ಗುರುತಿನ ಚೀಟಿಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು: ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಮತದಾರರ ನೋಂದಣಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. 17 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತದಾರರ ಗುರುತಿನ ಚೀಟಿಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಆಯೋಗ ಪ್ರಕಟಿಸಿದೆ. ಈ ಮೊದಲು, ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ನಾಗರಿಕರಿಗೆ ಜನವರಿ 1 ರಂದು 18 ವರ್ಷ ವಯಸ್ಸು ತುಂಬಬೇಕಾಗಿತ್ತು. ಈಗ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಯುವಕರು ಪ್ರತಿ ವರ್ಷ ನಾಲ್ಕು ಅವಕಾಶಗಳನ್ನು ಪಡೆಯುತ್ತಾರೆ. 17 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರಿಗಾಗಿ ಮೂರು ಅರ್ಹತಾ ದಿನಾಂಕಗಳನ್ನು ಉಲ್ಲೇಖಿಸಿ – […]