ವಿದ್ಯಾರ್ಥಿಗಳ ಸಮರ್ಥ ನಾಯಕತ್ವದಿಂದ ಸಮಾಜದ ಬೆಳವಣಿಗೆ ಸಾಧ್ಯ: ಈಶಪ್ರಿಯ ತೀರ್ಥ ಸ್ವಾಮೀಜಿ

ಉಡುಪಿ: ವಿದ್ಯಾರ್ಥಿಗಳಲ್ಲಿ ಇರುವ ಸಮರ್ಥ ನಾಯಕತ್ವದ ಗುಣವು ಸಮಸ್ತ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರ ದೀಪವಾಗುವುದು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಂಸ್ಥೆಯನ್ನು ಸಮಾಜವನ್ನು ಬೆಳೆಸುವಂತಾಗಲಿ ಎಂದು ಅದಮಾರು ಮಠದ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಈಶಪ್ರಿಯ ತೀರ್ಥ ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು. ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಆಶೀರ್ವದಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ಪ್ರೊ.ರಾಜೇಂದ್ರ ಭಟ್ ಮಾತನಾಡಿ, […]

ಜ. 22 ರಂದು ಸಹಕಾರ ರತ್ನ ಜಯಕರ್ ಶೆಟ್ಟಿ ಇಂದ್ರಾಳಿಯವರಿಗೆ ಅಭಿನಂದನಾ ಸಮಾರಂಭ

ಉಡುಪಿ: ಬಡಗಬೆಟ್ಟು ಕ್ರೆಡಿಕ್ ಕೋ-ಆಪ್ ಸೊಸೈಟಿ.ಲಿ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಲಯನ್. ಜಯಕರ್ ಶೆಟ್ಟಿ ಇಂದ್ರಾಳಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಸೇವಾ ಚಿಂತನ ಕಾರ್ಯಕ್ರಮವನ್ನು ಜ. 22 ಆದಿತ್ಯವಾರದಂದು ಬೆಳಗ್ಗೆ 9 ಗಂಟೆಗೆ ಮಿಷನ್ ಕಂಪೌಂಡ್ ರಸ್ತೆಯಲ್ಲಿರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮಿಜಿಯವರ ದಿವ್ಯ ಉಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಡಗಬೆಟ್ಟು ಕ್ರೆಡಿಟ್ ಕೊ-ಆಪ್ ಸೊಸೈಟಿಯ […]