ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ: ಸಿಎಂ ಯಡಿಯೂರಪ್ಪ

ಬೆಳಗಾವಿ: ನೌಕರರು ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ನಾನು ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧವಿದ್ದೇನೆ. ನೌಕರರು ಹಟ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನೌಕರರ 9 ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶದಿಂದ ಹಟ ಮಾಡುವುದು ಸರಿಯಲ್ಲ ಎಂದರು. ಸಾರಿಗೆ ನೌಕರರ ಬಳಿ ಸಾಕಷ್ಟು ಮನವಿ ಮಾಡಲಾಗಿತ್ತು. ಆದರೂ ಮುಷ್ಕರ ನಡೆಸುತ್ತಿದ್ದು, ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ […]