ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಚಾಮರಾಜನಗರ: ರಾಜ್ಯದಲ್ಲಿ ಈಗಾಗಲೇ ಹೊರಡಿಸಿರುವ ವೇಳಾಪಟ್ಟಿಯಂತೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಚಾಮರಾಜನಗರದ ಹನೂರಿನಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ 21 ನಿಗದಿಯಾಗಿದೆ. ಪರೀಕ್ಷೆ ನಡೆಸುವಂತೆ ಎಲ್ಲಾ ಕಡೆಯಿಂದ ಒತ್ತಾಯ ಬರುತ್ತಿದೆ. ಪರೀಕ್ಷೆ ಆರಂಭವಾಗುವ ದಿನಾಂಕ ಇನ್ನೂ ಎರಡು ತಿಂಗಳ ಮೇಲಿದೆ. ಹೀಗಾಗಿ ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಪರೀಕ್ಷೆ ನಡೆಸಲು ಕಳೆದ ವರ್ಷ ನೀಡಿದ್ದ ಎಸ್ಒಪಿಯನ್ನೇ ಅಳವಡಿಸಬೇಕಾ ಅಥವಾ ಇನ್ನೂ ಏನಾದರು […]