ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ: ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಪುದುಚೇರಿಯಲ್ಲಿ ಮೀನುಗಾರರೊಡನೆ ಸಂವಾದ ನಡೆಸಿದ ಅವರು, ಮೀನುಗಾರರು ಕಡಲ ರೈತರು ಎಂದು ಬಣ್ಣಿಸಿದರು. ದೆಹಲಿಯಲ್ಲಿ ರೈತರಿಗಾಗಿ ಪ್ರತ್ಯೇಕ ಸಚಿವಾಲಯ ಇದೆ. ಆದರೆ ಕಡಲಿನ ರೈತರಿಗೆ ಏನಾದರೂ ಸಮಸ್ಯೆಯಾದರೆ ಅದಕ್ಕಾಗಿ ಪ್ರತ್ಯೇಕ ಇಲಾಖೆ ಇಲ್ಲ. ರೈತರು ಸಮಸ್ಯೆಯಾದರೆ ಕೃಷಿ ಸಚಿವಾಲಯಕ್ಕೆ ಹೋಗುತ್ತಾರೆ. ಅದಕ್ಕಾಗಿ ಮೀನುಗಾರಿಕೆಗೆ ಸಂಬಂಧಿಸಿ ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ ಎಂದು ಹೇಳಿದ್ದಾರೆ.