ವಿಜಯನಗರ ಜಿಲ್ಲೆ ರಚನೆ ಬೆನ್ನಲ್ಲೇ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆಂದ ಬಿಜೆಪಿ ಶಾಸಕ
ಬೆಂಗಳೂರು: ಬಳ್ಳಾರಿ ಜಿಲ್ಲೆಯಿಂದ ಹೊಸಪೇಟೆ ತಾಲ್ಲೂಕನ್ನು ಬೇರ್ಪಡಿಸಿ, ನೂತನ ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸದ್ಯ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ಸಿಕ್ಕಿದ್ದು, ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರಕಲಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಜಿಲ್ಲೆ ಘೋಷಣೆ ಬೆನ್ನಲ್ಲೇ ಆಕ್ರೋಶ: ಬಳ್ಳಾರಿಯಿಂದ ಹೊಸಪೇಟೆ ಬೇರ್ಪಡಿಸಿ ಹೊಸ ಜಿಲ್ಲೆಯನ್ನಾಗಿ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದ […]