ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: SSLC ಮತ್ತು ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮತ್ತು ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.