ಸುಣ್ಣಾರಿ: ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರ

ಕುಂದಾಪುರ: ಜೆ.ಸಿ.ಐ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರವು ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಗದೀಶ್ ಜೋಗಿ ಇವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿದ್ಯಾರ್ಥಿಗಳ ಪರೀಕ್ಷಾ ಆತಂಕವನ್ನು ದೂರಮಾಡುತ್ತಾ ಸಮಯವು ಅತ್ಯಂತ ಮಹತ್ವಪೂರ್ಣವಾಗಿದ್ದು, ಕಳೆದು ಹೋದ ಸಮಯ ಮರಳಿಬಾರದು, ಎನ್ನುವ ಕಟುಸತ್ಯವನ್ನು ಅರಿತು ಶಿಸ್ತುಬದ್ಧವಾದ ಅಧ್ಯಯನ ನಡೆಸಬೇಕೆಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಧ್ಯಯನ ವೇಳಾಪಟ್ಟಿ ಹಾಕಿಕೊಂಡು ನಿರಂತರ ಓದುವುದು ಮತ್ತು ಓದಿದ ವಿಚಾರ ಹೆಚ್ಚು ಮನನ ಮಾಡಿಕೊಳ್ಳುವುದರಿಂದ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೆಂದು […]

ಗುಂಡೆಸೆತ ಸ್ಪರ್ಧೆ: ಎಕ್ಸಲೆಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಯತೀಶ್ ಶೆಟ್ಟಿ ಮತ್ತು ಸಿರಿಕಾ ಶೆಟ್ಟಿ ಇವರು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ಅಕ್ಷರ್ ಎನ್ ಶೆಟ್ಟಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.   ವಿದ್ಯಾರ್ಥಿಗಳನ್ನು ಎಂ.ಎ ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರೀಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, […]