ಜೆಇಇ-ಮೈನ್ಸ್: ಎಕ್ಸಲೆಂಟ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ; 3 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್
ಮಂಗಳೂರು: ಜನವರಿ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಉನ್ನತ ತಾಂತ್ರಿಕ ಕಾಲೇಜುಗಳ ಸೇರ್ಪಡೆಗೆ ನಡೆಸುವ ಜೆಇಇ (ಮೈನ್ಸ್) (JEE Mains) ಅರ್ಹತಾ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿರುತ್ತಾರೆ. ಡಾ ಪ್ರಶಾಂತ್ ಆರ್ ಹೆಗ್ಡೆಯವರ ಪುತ ನಿಶಾಂತ್ ಪಿ ಹೆಗ್ಡೆ(99.32950), ರವೀಂದ್ರ ಕುಮಾರ್‌ರವರ ಪುತ್ರ ಸಂಜಯ್ ಬಿರಾದರ್ (99.07267), ವೆಂಕಟೇಶ್ ಇವರ ಪುತ್ರ ಸಚಿನ್ ವಿ ನಾಗರಡ್ಡಿ (99.05742), ರಾಜೇಶ್ ವಿ ನಾಯಕ್ ಇವರ ಪುತ್ರ ರಿಷಭ್ ಆರ್ […]
ಡಿ.8,9 ಮತ್ತು 10 ರಂದು ಎಕ್ಸಲೆಂಟ್ ಕಾಲೇಜಿನಲ್ಲಿ ಪ.ಪೂ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ ಡಿ.8,9 ಮತ್ತು 10 ರಂದು ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದ್ದಾರೆ.
ಎಕ್ಸಲೆಂಟ್ ಪ.ಪೂರ್ವ ಕಾಲೇಜಿನ ವಿದಾರ್ಥಿಗಳಿಗಾಗಿ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ಕಾರ್ಯಕ್ರಮ
ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಸಂಸ್ಥೆಯ ವೀಕ್ಷಣೆ ಹಾಗೂ ಅಧ್ಯಯನ ವಿಷಯಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಏರ್ಪಡಿಸಲಾಯಿತು. ಉಡುಪಿ ಜಿಲ್ಲೆಯ ಉಪ್ಪೂರಿನ ಬಳಿ ಇರುವ ಕೆ.ಎಂ.ಎಫ್ ನಂದಿನಿ ಡೈರಿ ಸ್ಥಾವರಕ್ಕೆ ವಿದ್ಯಾರ್ಥಿಗಳು ಭೇಟಿ ಕೊಟ್ಟು ಹಾಲಿನ ಪಾಶ್ಚರೀಕರಣ ಮತ್ತು ಹಾಲನ್ನು ಪ್ಯಾಕೇಟುಗಳಲ್ಲಿ ಸಂಗ್ರಹಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಹಾಲಿನಿಂದ ತಯಾರಾಗುವ ವಿವಿಧ ತಿಂಡಿ-ತಿನಿಸುಗಳು, ಸಂಗ್ರಹಿಸುವ ವಿಧಾನಗಳು ಹಾಗೂ ವಿತರಣಾ ಕ್ರಮಗಳ ಬಗ್ಗೆ ಅರಿತುಕೊಂಡರು. […]
ಕುಂದಾಪುರ: ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ
ಕುಂದಾಪುರ: ಇಲ್ಲಿನ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರವು ನವೆಂಬರ್ 8 ರಂದು ನಡೆಯಿತು. ಈ ವ್ಯಕ್ತಿತ್ವ ವಿಕಸನ ಉಪನ್ಯಾಸ ಕಾರ್ಯಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ಉಪನ್ಯಾಸಕ ಸತೀಶ ಆರ್ ಮೈಸೂರು ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಇಂದಿನ ಯುವಕರೇ ನಾಳಿನ ನೇತಾರರು. ನೀವು ಈ ದೇಶವನ್ನು ಮುನ್ನೆಡೆಸಿ ರಕ್ಷಿಸುವವರು. ಯಶಸ್ಸಿನ ರಹಸ್ಯವಿರುವುದು ಏಕಾಗ್ರತೆಯಲ್ಲಿ […]
ಕುಂದಾಪುರ: ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ: ನಾಡು ನುಡಿಯ ಬಗ್ಗೆ ಅಭಿಮಾನ ಮತ್ತು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ ‘ಕೋಟಿ ಕಂಠ ಗೀತಗಾಯನ’ ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಜಯಭಾರತ ಜನನಿಯ ತನುಜಾತೆ, ಉದಯವಾಗಲಿ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಂಡಿಮವ, ಹಚ್ಚೇವು ಕನ್ನಡದ ದೀಪ , ವಿಶ್ವವಿನೂತನ […]