ಎಕ್ಸಿಟ್ ಪೋಲ್, ಅಭಿಪ್ರಾಯ ಸಂಗ್ರಹಣೆಗಿಲ್ಲ ಅವಕಾಶ: ಚುನಾವಣಾ ಆಯೋಗ ನಿರ್ದೇಶನ
ನವದೆಹಲಿ: ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.19ರ ಬೆಳಿಗ್ಗೆ 7 ರಿಂದ ಜೂ.1ರ ಸಂಜೆ 6.30ರವರೆಗೆ ಯಾವುದೇ ಚುನಾವಣೋತ್ತರ ಸಮೀಕ್ಷೆ(Exit Polls) ನಡೆಸುವುದಾಗಲಿ, ಪ್ರಕಟಿಸುವುದಾಗಲಿ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶ ನೀಡಿದೆ. ಅಭಿಪ್ರಾಯ ಸಂಗ್ರಹಗಳು, ಚುನಾವಣಾ ಸಮೀಕ್ಷೆ ಫಲಿತಾಂಶ ಸೇರಿದಂತೆ ಯಾವುದೇ ಚುನಾವಣೆ ಸಂಬಂಧಿ ಮಾಹಿತಿಗಳನ್ನು ಚುನಾವಣೆ ಮುಗಿಯುವವರೆಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿನ ಪ್ರಸಾರಕ್ಕೆ ಜನಪ್ರತಿನಿಧಿಗಳ ಕಾಯ್ದೆ ಅನುಸಾರ ನಿರ್ಬಂಧಿಸಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ: 72.67% ಮತದಾನ; ಅತಂತ್ರ ಸರಕಾರದ ಮುನ್ಸೂಚನೆ ನೀಡಿದ ಎಕ್ಸಿಟ್ ಪೋಲ್ ಗಳು
ಬೆಂಗಳೂರು: ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸರಿಸುಮಾರು 72.67% ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44% ಮತ್ತು 2013 ರಲ್ಲಿ 71.83% ಮತದಾನವಾಗಿತ್ತು. ದ.ಕ ಜಿಲ್ಲೆಯಲ್ಲಿ 76.15% ಮತದಾನವಾಗಿದ್ದರೆ, ಉಡುಪಿಯಲ್ಲಿ 78.46% ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ವಾಧಿಕ 85.83% ಮತದಾನವಾಗಿದ್ದರೆ, ಬಿ.ಬಿ.ಎಂ.ಪಿ(ದಕ್ಷಿಣ) ದಲ್ಲಿ 52.80% ಮತದಾನ ನಡೆದಿದೆ. ಮೂರು ಪ್ರಮುಖ ಎಕ್ಸಿಟ್ ಪೋಲ್ ಏಜೆನ್ಸಿಗಳು ಸೂಚಿಸಿದಂತೆ ಕರ್ನಾಟಕವು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಗೆ ಬಹುಮತವನ್ನು ಸೂಚಿಸುತ್ತಿದ್ದರೆ ಮತ್ತೆ ಕೆಲವು ಪೋಲ್ […]
ವಿಶ್ವದ ಅತಿ ಎತ್ತರದ ಮತದಾನ ಕೇಂದ್ರ ತಾಶಿಗ್ಯಾಂಗ್ ನಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಮತ ಚಲಾವಣೆ; ನ. 12 ರಿಂದ ಡಿ.5 ಎಕ್ಸಿಟ್ ಪೋಲ್ ಗೆ ನಿಷೇಧ
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿರುವ ತಾಶಿಗ್ಯಾಂಗ್ 15256 ಅಡಿಗಳಷ್ಟು ಎತ್ತರದಲ್ಲಿರುವ ವಿಶ್ವದ ಅತಿ ಎತ್ತರದ ಮತದಾನ ಕೇಂದ್ರವಾಗಿದೆ. ತಾಶಿಗ್ಯಾಂಗ್ ನಿವಾಸಿಗಳು ನಾಳೆ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಎಂದು ಎಐಆರ್ ವರದಿಗಾರರು ವರದಿ ಮಾಡಿದ್ದಾರೆ. ವಿಶ್ವದ ಅತಿ ಎತ್ತರದ ಮತದಾನ ಕೇಂದ್ರವಾದ ತಾಶಿಗ್ಯಾಂಗ್ ಅನ್ನು 2019 ರಲ್ಲಿ ಸ್ಥಾಪಿಸಲಾಯಿತು ಮತ್ತು ಮತದಾರರು ಲೋಕಸಭೆ ಚುನಾವಣೆ ಮತ್ತು ಲೋಕಸಭೆ ಉಪಚುನಾವಣೆಯಲ್ಲಿ ಎರಡು ತಮ್ಮ ಹಕ್ಕು ಚಲಾಯಿಸಿದ್ದಾರೆ. ಆದರೆ ಈ ಬಾರಿ ಮತದಾರರು ಇದೇ ಮೊದಲ ಬಾರಿಗೆ ವಿಧಾನಸಭಾ […]