ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಆಚರಣೆ

ಮಂಗಳೂರು: ‘ಕತ್ತಲೆಯಿಂದ ಬೆಳಕಿನಕಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಸಾಗುವುದೇ ದೀಪಾವಳಿಯ ವಿಶೇಷ. ಆ ಮೂಲಕ ನಮ್ಮಲ್ಲಿ ಪ್ರೀತಿ, ವಿಶ್ವಾಸ ಸೌಹಾರ್ದ ಬೆಳೆಯಬೇಕು. ದೀಪಾವಳಿಯು ಎಲ್ಲರ ಜೀವನದಲ್ಲಿ ಬೆಳಕನ್ನು ತರಲಿ ಎಂದು ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಮಾತಾನಂದಮಯಿ ಹೇಳಿದರು. ಅವರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆಶ್ರಯದಲ್ಲಿಎಕ್ಸ್ಪೋಡಿಯಂ ಸಭಾಂಗಣದಲ್ಲಿ ನಡೆದ ದೀಪಾವಳಿ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೀಪಾವಳಿಯ ಸಂಭ್ರಮದಲ್ಲಿ ವಿದ್ಯಾರ್ಥಿಗಳು ಆಧ್ಯಾತ್ಮಿಕ ದೃಷ್ಟಿಕೋನದ ಹಿನ್ನೆಲೆಯಲ್ಲಿ ಲೌಕಿಕ ಮತ್ತು ಅಲೌಕಿಕ ಭಾವವನ್ನು […]

ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಸನ್ನಕುಮಾರ್ ಅವರಿಗೆ ಪಿ.ಎಚ್.ಡಿ.

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರಸನ್ನಕುಮಾರ್ ಆರ್ ಇವರು ಸಲ್ಲಿಸಿದ “ಸ್ಟಡಿ ಆಫ್ ಸ್ಟ್ರಕ್ಚರಲ್, ಆಪ್ಟಿಕಲ್‌ ಆ್ಯಂಡ್ ಮ್ಯಾಗ್ನೆಟಿಕ್ ಪ್ರೋಪರ್ಟೀಸ್‌ ಆಫ್‌ ಎಮ್‌ ಎನ್ ಕೊ ಆ್ಯಂಡ್‌ ಡಿವೈಡೊಪ್ಡ್ ಬಿಸ್ಮತ್ ಫೆರೈಟ್‌ಥಿನ್‌ಫಿಲ್ಮ್ಸ್” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿಯನ್ನುನೀಡಿ ಗೌರವಿಸಿದೆ. ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಗೋಪಾಲಕೃಷ್ಣ ನಾಯಕ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಇವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ರಾಮಶೆಟ್ಟಿ ಮತ್ತು ನಾಗಮ್ಮ ದಂಪತಿಗಳ ಪುತ್ರರಾಗಿದ್ದಾ

ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ನವೀಕೃತ ಕಚೇರಿ ಉದ್ಘಾಟನೆ

ಮಂಗಳೂರು: ಕೊಡಿಯಾಲ್‌ಬೈಲ್‌ ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ನವೀಕೃತ ಕಚೇರಿಯನ್ನು ಮಂಗಳೂರಿನ ಖ್ಯಾತ ನೇತ್ರ ತಜ್ಞ ಡಾ.ವಿಷ್ಣುಪ್ರಭು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯು ಕಳೆದ ಕೆಲವು ದಶಕಗಳಿಂದ ಉತ್ತಮ ಗುಣಮಟ್ಟದ ಮೌಲ್ಯಾತ್ಮಕ ಶಿಕ್ಷಣವನ್ನು ಕೊಡುವಲ್ಲಿ ಅಪಾರವಾದ ಪರಿಶ್ರಮ ಪಟ್ಟಿದೆ ಎಂದ ಅವರು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ. ಎಲ್. ನಾಯಕ್ ಹಾಗೂ ಉಪಾಧ್ಯಕ್ಷೆ ಡಾ.ಉಷಾಪ್ರಭಾ ನಾಯಕ್‌ ರವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿಎಕ್ಸ್ಪರ್ಟ್ ಶಿಕ್ಷಣ […]

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನ ಆಚರಣೆ

ಮಂಗಳೂರು: ಸೋಮವಾರದಂದು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಹೆಸರಾಂತ ಇ.ಎನ್.ಟಿ ಶಸ್ತ್ರ ಚಿಕಿತ್ಸಕ ಡಾ.ಕಿಶೋರ್ ಶೆಟ್ಟಿ ಕಾರ್ಯಕರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಪದವಿಪೂರ್ವ ಹಂತವೆಂಬುದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಅಡಿಪಾಯ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು, ಸಮರ್ಪಣಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ನಮ್ಮ ಕನಸು ಯಾವಾಗಲೂ ದೊಡ್ಡದಾಗಿರಬೇಕು ಎಂದರು. ಈ ಸಂದರ್ಭದಲ್ಲಿಎಕ್ಸ್ಪರ್ಟ್ ನ ನೂತನ ಸಭಾಂಗಣ ‘ಎಕ್ಸ್ಪೋಡಿಯಂ’ ಅನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. […]

ಸಿಇಟಿ: ಮೊದಲ 50 ರಲ್ಲಿ 20 ರ‍್ಯಾಂಕ್ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪ.ಪೂ ಕಾಲೇಜು ವಿದ್ಯಾರ್ಥಿಗಳು

ಮಂಗಳೂರು: 2022ನೇ ಸಾಲಿನ ಸಿಇಟಿ ಪರೀಕ್ಷೆಯ ಐದು ವಿಭಾಗದ ಮೊದಲ 10 ರ‍್ಯಾಂಕ್‌ಗಳಲ್ಲಿ 2 ರ‍್ಯಾಂಕ್‌ಗಳನ್ನು ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಮೊದಲ 50 ರ‍್ಯಾಂಕ್‌ನಲ್ಲಿ 20 ರ‍್ಯಾಂಕ್ ಹಾಗೂ ಮೊದಲ 100 ರ‍್ಯಾಂಕ್‌ನಲ್ಲಿ 49 ರ‍್ಯಾಂಕ್‌ಗಳನ್ನು ಎಕ್ಸ್ಪರ್ಟ್ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಮೊದಲ 150 ರಲ್ಲಿ 78 ರ‍್ಯಾಂಕ್, ಮೊದಲ 200 ರ‍್ಯಾಂಕ್‌ಗಳಲ್ಲಿ 105, ಮೊದಲ 300 ರ‍್ಯಾಂಕ್‌ಗಳಲ್ಲಿ 153 ರ‍್ಯಾಂಕ್‌ಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಾಲೇಜಿನ ಆದಿತ್ಯಾ ಕಾಮತ್ ಅಮ್ಮೆಂಬಳ ಬಿಎನ್‌ವೈಎಸ್‌ನಲ್ಲಿ […]