ಬೆಳ್ಮಣ್: ಆ.27 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ
ಬೆಳ್ಮಣ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು, ಬೆಳ್ಮಣ್ ವಲಯ, ಶ್ರೀ ಹರಿ ನೇತ್ರಾಲಯ, ಅಂಬಲಪಾಡಿ, ಉಡಿಪಿ, ಬೆಳ್ಮಣ್ ನೇತ್ರ ಚಿಕಿತ್ಸಾಲಯ, ಗ್ರಾಮ ಪಂಚಾಯತ್ ಬೆಳ್ಮಣ್ ಇವರ ಸಂಯುಕ್ತ ಆಶ್ರಯದಲ್ಲಿ ಆ.27 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರವು ಬೆಳ್ಮಣಿನ ದಾಮೋದರ ಕಾಂಪ್ಲೆಕ್ಸ್ ನಲ್ಲಿರುವ ಬೆಳ್ಮಣ್ ಕಣ್ಣಿನ ಕ್ಲಿನಿಕ್ ನಲ್ಲಿ ಬೆಳಿಗ್ಗೆ 9.30 ರಿಂದ 1.30 ರವರೆಗೆ ನಡೆಯಲಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಜೂನ್ 25: ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ವತಿಯಿಂದ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ, ಪ್ರಸಾದ್ ನೇತ್ರಾಲಯ, ಕನ್ನರ್ಪಾಡಿ ಬಿಲ್ಲವ ಸೇವಾ ಸಂಘ, ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕಡೆಕಾರು, ಕಡೆಕಾರು ಗ್ರಾಮ ಪಂಚಾಯತ್, ಕೆ.ಎಂ.ಸಿ ಸಮುದಾಯ ವೈದ್ಯಕೀಯ ವಿಭಾಗ, ನಿರೂಪಮ ಪ್ರಸಾದ್ ಶೆಟ್ಟಿ ಸಾಫಲ್ಯ ಟ್ರಸ್ಟ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ( ಅಂಧತ್ವ ವಿಭಾಗ), ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಮತ್ತು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ನೇತ್ರ ಹಾಗೂ […]