ಸಮತೋಲಿತ ಆಹಾರ ಸೇವಿಸಿರಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿರಿ
ಕಣ್ಣು ಮಾನವನ ದೇಹದ ಬಹುಮುಖ್ಯ ಅಂಗಗಳಲ್ಲಿ ಒಂದು. ಕಣ್ಣಿನ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿದೆ. ಇಂದಿನ ಕಲುಷಿತ ವಾತಾವರಣ ಮತ್ತು ಅತಿಯಾದ ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಚಿಕ್ಕ ಮಕ್ಕಳಿಂದ ಹಿಡಿದು, ವೃದ್ದವರೆಗೂ ದೃಷ್ಟಿ ದೋಷ ಎಲ್ಲರನ್ನೂ ಬಾಧಿಸುತ್ತದೆ. ಕಣ್ಣಿನ ಆರೋಗ್ಯಕ್ಕಾಗಿ ಪೌಷ್ಠಿಕಾರಕ ಆಹಾರವನ್ನು ಸೇವಿಸುವುದು ಅವಶ್ಯವಾಗಿದ್ದು, ಅವುಗಳ ಮಾಹಿತಿ ಇಲ್ಲಿದೆ. ಲುಟೀನ್ ಮತ್ತು ಝೀಕ್ಸಾಂಥಿನ್ ಲುಟೀನ್ ಮತ್ತು ಝೀಕ್ಸಾಂಥಿನ್ ಎಂಬ ಈ ಉತ್ಕರ್ಷಣ ನಿರೋಧಕಗಳು ಸೂರ್ಯನ ಬೆಳಕಿನಲ್ಲಿರುವ ಯುವಿ ಕಿರಣಗಳಂತಹ ಹಾನಿಕಾರಕ ಅಧಿಕ ಶಕ್ತಿಯ ಬೆಳಕಿನ ಅಲೆಗಳಿಂದ […]