ಕಾರುಗಳ ನಡುವೆ ಭೀಕರ ಅಪಘಾತ: ಮೂವರು ವೈದ್ಯಕೀಯ ವಿದ್ಯಾರ್ಥಿಗಳು ದುರ್ಮರಣ
ರಾಯಚೂರು: ರಾಯಚೂರಿನ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿ ಕಳೆದ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸ್ಥಳದಲ್ಲೇ 3 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಮೂವರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ.