ಸಾಮಾಜಿಕ ಜಾಲತಾಣದಲ್ಲಿ ರಜೆ ಬಗ್ಗೆ ಸುಳ್ಳು ಸುದ್ದಿ: ಜಿಲ್ಲಾಡಳಿತದಿಂದ ಸೈಬರ್ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಗೆ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ, ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತವು ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ […]