ನಕಲಿ ಅಂಕಪಟ್ಟಿ: ಬಿಜೆಪಿ ಶಾಸಕನಿಗೆ ಶಿಕ್ಷೆ

ಅಯೋಧ್ಯೆ: ಕಾಲೇಜಿಗೆ ಪ್ರವೇಶ ಪಡೆಯಲು ನಕಲಿ ಅಂಕಪಟ್ಟಿ ನೀಡಿದ್ದ 28 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಯೋಧ್ಯೆಯ ಗೋಸಾಯ್‌ಗಂಜ್‌ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ತಿವಾರಿಗೆ ಸೋಮವಾರ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ಅಯೋಧ್ಯೆಯ ಗೋಸಾಯ್‌ಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ‌1992 ರಲ್ಲಿ ತಿವಾರಿ ವಿರುದ್ಧ ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಅಂದಿನ ಪ್ರಾಂಶುಪಾಲ ಯದುವಂಶ ರಾಮ್ ತ್ರಿಪಾಠಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ […]