ಸುಳ್ಳು ಜಾತಿ ನಿಂದನೆ ಪ್ರಕರಣ: ಪಾರದರ್ಶಕ ತನಿಖೆಗೆ ಕಾಂಗ್ರೆಸ್ ಆಗ್ರಹ
ಉಡುಪಿ: ತೆಂಕನಿಡಿಯೂರು ಗ್ರಾಪಂ ಮುಖ್ಯದ್ವಾರದ ತೆರವು ಕಾರ್ಯ ಪ್ರಶ್ನಿಸಿ ಪ್ರತಿಭಟನೆ ನಡೆಸಿದವರ ಮೇಲೆ ಪಂಚಾಯತ್ ಅಧ್ಯಕ್ಷರು ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಇದನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ತೆಂಕನಿಡಿಯೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಎಎಸ್ಪಿ ಕುಮಾರಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಅಲ್ಲದೆ, ತಾಪಂ ಸದಸ್ಯ ಧನಂಜಯ ಕುಂದರ್ ಮತ್ತು ಇತರರಿಗೆ ಬೆದರಿಕೆ ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಖ್ಯಾತ್ ಶೆಟ್ಟಿ, […]