ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
ಬೆಳಗಾವಿ: ಮುಂಜಾಗೃತ ಕ್ರಮವಾಗಿ ರೈತ ಮುಖಂಡ ಹಾಗೂ ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬೆಳಗಾವಿಯ ಮಿಲನ್ ಹೋಟೆಲ್ ಬಳಿ ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. 6ನೇ ವೇತನ ಆಯೋಗ ಜಾರಿ ಮಾಡಬೇಕೆಂದು ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಾದ್ಯಂತ ಮುಷ್ಕರವನ್ನ ಮತ್ತಷ್ಟು ತೀವ್ರಗೊಳಿಸಲು ಸಾರಿಗೆ ನೌಕರರ ಮುಖಂಡರು ತಯಾರಿ ನಡೆಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಳಗಾವಿಗೆ ಪ್ರಯಾಣ ಬೆಳಸಿದ್ದರು. ಬೆಳಗಾವಿ […]