ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನ

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಇವರ ವತಿಯಿಂದ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ಜಿಲ್ಲೆಯ ಅರ್ಹ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಅಥವಾ ಜಂಟಿ ಕೃಷಿ ನಿರ್ದೇಶಕರ […]

ಬೈರಂಪಳ್ಳಿ: ಗದ್ದೆ ಕೆಲಸದಲ್ಲಿ ನಿರತನಾಗಿದ್ದ ಯುವಕ ಜಾರಿ ಬಿದ್ದು ಸಾವು

  ಹಿರಿಯಡ್ಕ: ಇಲ್ಲಿನ ಬೈರಂಪಳ್ಳಿಯಲ್ಲಿ ಗದ್ದೆ ಕೆಲಸದಲ್ಲಿ ನಿರತನಾಗಿದ್ದ ಯುವ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಜುಲೈ 3ರಂದು ನಡೆದಿದೆ. ಬೈರಂಪಳ್ಳಿ ದೂಪದಕಟ್ಟೆ ನಿವಾಸಿ 35 ವರ್ಷದ ಉಮೇಶ್ ಕುಲಾಲ್ ಮೃತಪಟ್ಟ ದುರ್ದೈವಿ. ಉಮೇಶ್ ತನ್ನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪಿ.ಎಂ ಕಿಸಾನ್ ಯೋಜನೆ : ಇ-ಕೆವೈಸಿ ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ಮೇ 31 ರ ಒಳಗೆ ಹತ್ತಿರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.