ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಕೃಷಿ ಸಚಿವ ಬಿ.ಸಿ. ಪಾಟೀಲ್

ಮಡಿಕೇರಿ: ಸಾಲ ಸಹಿತ ಇತರೆ ಕಾರಣಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ. ಪೊನ್ನಂಪೇಟೆಯ ಸಮೀಪದ ಕೃಷಿ ಕಾಲೇಜಿನಲ್ಲಿ ಗುರುವಾರ ಬಿದಿರು ಸಂಸ್ಕರಣೆ ಹಾಗೂ ಬಿದುರು ಮೌಲ್ಯವರ್ಧನಾ ಘಟಕ ಉದ್ಘಾಟಿಸಿ ಮಾತನಾಡಿದರು. ಕೃಷಿ ಮಾಡಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಆದರೆ ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೆಂಡತಿ ಹಾಗೂ ಮಕ್ಕಳನ್ನು ನೋಡಿಕೊಳ್ಳದ ರೈತ ಹೇಡಿ ಎಂದರು.