ಗ್ರಾಮೀಣ ಬ್ಯಾಂಕ್ ಗಳಿಂದ ಸಾಲ ಪಡೆದ ರೈತರ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಳ್ಳಾರಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್ ಪುಟ್ಟಣ್ಣಯ್ಯ […]
ರೈತರ ಬದುಕು ಬವಣೆಯ ಅನಾವರಣೆಯ “ಶ್ರೀಮಂತ”: ಮೊದಲ ಬಾರಿಗೆ ನಾಯಕನಟನಾಗಿ ಅಭಿನಯಿಸಿದ ಸೋನು ಸೂದ್
ಹಾಸನ್ ರಮೇಶ್ ಎಂಬ ಕಾವ್ಯನಾಮದಿಂದ ಹತ್ತು ವರ್ಷಗಳಿಂದ ಕನ್ನಡ ಚಿತ್ರರಂಗದ ಹತ್ತು ಹಲವು ವಿಭಾಗಗಳಲ್ಲಿ ತೊಡಗಿಸಿಕೊಂಡಿರುವ ಟಿ.ಕೆ ರಮೇಶ್ ಇದೀಗ ತನ್ನದೇ ಆದ ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿಯಲ್ಲಿ ಪ್ರಥಮ ಬಾರಿಗೆ ಸ್ವತಂತ್ರವಾಗಿ “ಶ್ರೀಮಂತ” ಎಂಬ ಚಲನಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದ್ದು, ಜಿ.ನಾರಾಯಣಪ್ಪ ಮತ್ತು ವಿ.ಸಂಜಯ್ ಬಾಬು ಸಹನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. “ಶ್ರೀಮಂತ” ಚಲನಚಿತ್ರವು ರೈತರ ದೈನಂದಿನ ಬದುಕು ಬವಣೆಯ ಅನಾವರಣವಾಗಿದ್ದು ಆತನೇ ಜಗತ್ತಿನ ದೊಡ್ಡ ಶ್ರೀಮಂತ ಎಂದು ಸಾಕ್ಷೀಕರಿಸುವ, ಮರೆಯಾಗುತ್ತಿರುವ ಹಳ್ಳಿಯ ಸುಗ್ಗಿ, ಜಾತ್ರೆ, ಹಬ್ಬ, ಹಾಡು […]
ಸಬ್ಸಿಡಿಯೊಂದಿಗೆ ಲಭ್ಯ ಈಸೀ ಲೈಫ್ ಯಾಂತ್ರೀಕೃತ ಕೈ ಗಾಡಿ-ಮೋಟೋಕಾರ್ಟ್
ರೈತರಿಗೆ ಸಂತೋಷದ ಸುದ್ದಿ.. ಇದೀಗ ಮೋಟೋಕಾರ್ಟ್ ಸಬ್ಸಿಡಿಯೊಂದಿಗೆ ಈಸೀ ಲೈಫ್ ಯಾಂತ್ರೀಕೃತ ಕೈ ಗಾಡಿ ಕೇವಲ ರೂ.42,000 ಕ್ಕೆ ಲಭ್ಯ. ಬೇಕಾಗುವ ದಾಖಲೆಗಳು: • RTC/ಪಾಣೆ (ಬೆಳೆ: ಭತ್ತ ಕಡ್ಡಾಯ) • ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ • 2 ಫೋಟೋ ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 9901876682
ಸರ್ಕಾರಿ ಇಲಾಖೆಗಳಲ್ಲಿ ಕೃಷಿಕರ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆ ನೀಡಿ: ವಿ ಸುನೀಲ್ ಕುಮಾರ್
ಉಡುಪಿ: ದೇಶದ ಬೆನ್ನುಲುಬಾದ ರೈತರು ಇತ್ತೀಚಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಂದ ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರುತ್ತಿಲ್ಲ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಸರ್ಕಾರವು ಪ್ರಯತ್ನಿಸುತ್ತಿದೆ. ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಯಾಂತ್ರೀಕರಣ ಹಾಗೂ ಆಧುನಿಕತೆಯನ್ನು ಬೆಳಸಿಕೊಂಡಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಸರ್ಕಾರಿ ಇಲಾಖೆಗಳಲ್ಲಿ ರೈತರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು. ಅವರು ಸೋಮವಾರದಂದು ರಜತಾದ್ರಿಯ ಜಿಲ್ಲಾ […]
ಪಹಣಿಪತ್ರವಿಲ್ಲದೆ ಪರದಾಡುತ್ತಿರುವ ಹಳ್ಳಿಹೊಳೆ ಕೃಷಿಕರು: ಜಿಲ್ಲಾಧಿಕಾರಿ ಮುಂದೆ ಅಹವಾಲು ತೋಡಿಕೊಂಡ ಗ್ರಾಮಸ್ಥರು
ಉಡುಪಿ: ಹಳ್ಳಿಹೊಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆದ, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಬೈಂದೂರು ತಾಲೂಕು ವ್ಯಾಪ್ತಿಯ ಅತ್ಯಂತ ಕುಗ್ರಾಮಗಳಲ್ಲಿ ಒಂದಾದ ಹಳ್ಳಿಹೊಳೆ ಗ್ರಾಮದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ, ನೆಟ್‌ವರ್ಕ್ ಸಮಸ್ಯೆ, ಕಾಲುಸಂಕದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಸಾರ್ವಜನಿಕರು, […]