ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಂತೆ ಕಾರ್ಯ ನಿರ್ವಹಿಸಿ: ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ‌ ಕರೆ

ಉಡುಪಿ: ಜಿಲ್ಲೆಯ ಬಿಜೆಪಿ ರೈತ ಮೋರ್ಚಾವು ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಅವರು ಬುಧವಾರ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನನ್ನ […]

ರಸಗೊಬ್ಬರ ಬೆಲೆ ಏರಿಕೆ: ರೈತ ರಕ್ಷಣೆಗಾಗಿ ರೂ 3.4 ಲಕ್ಷ ಕೋಟಿ ಸಹಾಯಧನ; ಕೇಂದ್ರ ಸರ್ಕಾರದ ವಾಗ್ದಾನ

ನವದೆಹಲಿ: ಜಾಗತಿಕವಾಗಿ ಏರುತ್ತಿರುವ ರಸಗೊಬ್ಬರಗಳ ಬೆಲೆಯಿಂದ ರೈತರನ್ನು ರಕ್ಷಿಸಲು 2022-23 ರ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಮಂಜೂರು ಮಾಡಲಾದ 1.05 ಲಕ್ಷ ಕೋಟಿ ರೂಪಾಯಿಗಳ ಜೊತೆಗೆ ಹೆಚ್ಚುವರಿಯಾಗಿ 1.10 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕ ಕಡಿತವನ್ನು ಘೋಷಿಸಿ, “ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ಗೆ 6 […]

ಬಗೆ ಬಗೆ ಮಾವು, ರುಚಿ ರುಚಿ ಮಾವು: ದೊಡ್ಡಣ್ಣಗುಡ್ಡೆ ಮಾವು ಮಾರಾಟ ಮೇಳದಲ್ಲಿ ಹಣ್ಣುಗಳ ರಾಜನ ದರ್ಬಾರ್!

ಉಡುಪಿ: ಹಣ್ಣುಗಳ ರಾಜನೆಂದೇ ಹೆಸರುವಾಸಿಯಾದ, ಕಿರಿಯರಿಂದ ಹಿಡಿದು ಹಿರಿಯರವರೆಗೂ ಬಾಯಲ್ಲಿ ನಿರೂರಿಸುವ ವಿವಿಧ ಬಗೆಯ ಮಾವಿನ ಹಣ್ಣಿನ ಮೇಳವನ್ನು ಉಡುಪಿ ದೊಡ್ಡಣಗುಡ್ಡೆ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ನೇರವಾಗಿ ರೈತರಿಂದಲೇ ನೈಸರ್ಗಿಕ ತಾಜಾ ಹಾಗೂ ಸ್ವಾದಿಷ್ಟ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸುವುದು, ಸಾರ್ವಜನಿಕರಿಗೆ ವಿವಿಧ ಮಾವಿನ ತಳಿಗಳನ್ನು ಪರಿಚಯಿಸುವುದು, ಹವಾಮಾನ ವೈಪರೀತ್ಯದಿಂದಾಗಿ ಮಾವು ಇಳುವರಿ ನಷ್ಟದಲ್ಲಿರುವ ಬೆಳೆಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿ. ಪಂ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ರಾಮನಗರ ಜಿಲ್ಲಾ […]

ಮೇ.16-28 ರ ವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಮಗ್ರ ಕೃಷಿ ಅಭಿಯಾನ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮವು ಮೇ 16 ರಿಂದ 28 ರ ವರೆಗೆ ಉಡುಪಿ ತಾಲೂಕಿನ ಎಲ್ಲಾ ಹೋಬಳಿಗಳ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ, ಕೃಷಿ ಹಾಗೂ ಬೇಸಾಯ ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ರೈತರಿಗೆ ಉತ್ಪಾದಕತೆ ಹೆಚ್ಚಿಸುವ ತಾಂತ್ರಿಕತೆಗಳ ಮನವರಿಕೆ ಹಾಗೂ ವಿಜ್ಞಾನಿಗಳೊಂದಿಗೆ ರೈತರ ಸಂವಾದ […]