ಅಜ್ಜರಕಾಡು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಉಡುಪಿ: ಇಲ್ಲಿನ ಅಜ್ಜರಕಾಡು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಆಗ್ರಹಿಸಿ ಯುವಶಕ್ತಿ ಕರ್ನಾಟಕದ ವತಿಯಿಂದ ಇಂದು ಬೆಳ್ಳಿಗೆ 7 ರಿಂದ ಅಜ್ಜರಕಾಡಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ. ಸರ್ಕಾರ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕೂಡಲೇ ಕ್ರಮಗೈಗೊಳ್ಳಬೇಕು. ನಿರ್ಲಕ್ಷ ವಹಿಸಿದ್ದಲ್ಲಿ ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಯುವ ಶಕ್ತಿ ಕರ್ನಾಟಕ ಸಮಿತಿ ಎಚ್ಚರಿಸಿದೆ. ಮನೋವೈದ್ಯ ಡಾ ಪಿ. ವಿ ಭಂಡಾರಿ ಉಪವಾಸ ಸತ್ಯಾಗ್ರಹಕ್ಕೆ ಚಾಲನೆ ನೀಡಿ, ಸರಕಾರಿ ಆಸ್ಪತ್ರೆಯ ಅವಶ್ಯಕತೆಯ ಬಗ್ಗೆ ಮಾತನಾಡಿದರು. ಸತ್ಯಾಗ್ರಹದಲ್ಲಿ ಯುವಶಕ್ತಿ ಕರ್ನಾಟಕ ಇದರ ರಾಜ್ಯಾಧ್ಯಕ್ಷ ಪ್ರಮೋದ್ […]