ನಿಮೆಸುಲೈಡ್ ಮತ್ತು ಪ್ಯಾರೆಸಿಟಮಾಲ್ ಮಾತ್ರೆ ಸೇರಿದಂತೆ 14 ಎಫ್‌ಡಿಸಿ ಔಷಧಿಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರ

ನವದೆಹಲಿ: ನಿಮೆಸುಲೈಡ್ ಮತ್ತು ಪ್ಯಾರೆಸಿಟಮಾಲ್ ಮಾತ್ರೆಗಳು ಮತ್ತು ಕ್ಲೋರ್ಫೆನಿರಮೈನ್ ಮಲೇಟ್ ಮತ್ತು ಕೊಡೈನ್ ಸಿರಪ್ ಸೇರಿದಂತೆ 14 ಫಿಕ್ಸೆಡ್ ಡೋಸ್ ಸಂಯೋಜನೆಯ ಔಷಧಗಳು ಜನರಿಗೆ ಅಪಾಯವನ್ನುಂಟುಮಾಡುತ್ತವೆ ಎಂದು ಕೇಂದ್ರ ಸರ್ಕಾರವು ನಿಷೇಧಿಸಿದೆ. ಈ ಫಿಕ್ಸ್‌ಡ್ ಡೋಸ್ ಕಾಂಬಿನೇಶನ್ (ಎಫ್‌ಡಿಸಿ) ಔಷಧಿಗಳಿಗೆ “ಯಾವುದೇ ಚಿಕಿತ್ಸಕ ಸಮರ್ಥನೆ” ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ಹೇಳಿದೆ. ಎಫ್‌ಡಿಸಿ ಔಷಧಿಗಳೆಂದರೆ ಎರಡು ಅಥವಾ ಹೆಚ್ಚು ಸಕ್ರಿಯ ಔಷಧೀಯ ಪದಾರ್ಥಗಳು ಒಂದು ಸ್ಥಿರ ಅನುಪಾತದಲ್ಲಿ ಸಂಯೋಜನೆಯನ್ನು ಒಳಗೊಂಡಿರುತ್ತದೆ. ತಜ್ಞರ ಸಮಿತಿಯ […]