ಬಾಹ್ಯಾಕಾಶ ಕ್ಷೇತ್ರದಲ್ಲಿ 100% FDI ಗೆ ಅನುಮತಿ: ಮೋದಿ ಕ್ಯಾಬಿನೆಟ್ ನಿರ್ಧಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದರಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಸ್ತಿತ್ವದಲ್ಲಿರುವ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನೀತಿಗೆ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. “ತಿದ್ದುಪಡಿಗೊಂಡ ಎಫ್‌ಡಿಐ ನೀತಿಯ ಅಡಿಯಲ್ಲಿ, ಬಾಹ್ಯಾಕಾಶ ಕ್ಷೇತ್ರದಲ್ಲಿ 100% ಎಫ್‌ಡಿಐ ಅನ್ನು ಅನುಮತಿಸಲಾಗಿದೆ. ತಿದ್ದುಪಡಿ ನೀತಿಯಡಿಯಲ್ಲಿ ಉದಾರೀಕರಣಗೊಂಡ ಪ್ರವೇಶ ಮಾರ್ಗಗಳು ಬಾಹ್ಯಾಕಾಶದಲ್ಲಿ ಭಾರತೀಯ ಕಂಪನಿಗಳಲ್ಲಿ ಹೂಡಿಕೆ ಮಾಡಲು ಸಂಭಾವ್ಯ ಹೂಡಿಕೆದಾರರನ್ನು ಆಕರ್ಷಿಸುವ ಗುರಿಯನ್ನು ಹೊಂದಿವೆ” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. […]