ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸುವ ಭೀತಿ.!
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ‘ತೌಕ್ತೆ’ ಚಂಡಮಾರುತ ಏಳುವ ಸಾಧ್ಯತೆಗಳಿವೆ. ಚಂಡಮಾರುತದಿಂದ ಕರ್ನಾಟಕದ ಕರಾವಳಿ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ ಮೇ 16ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ತೀವ್ರವಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ದೋಣಿಗಳು, ಮೀನುಗಾರಿಕೆಗೆ ಇಳಿಯಬಾರದು. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ದೋಣಿಗಳು ದಡಕ್ಕೆ ಸೇರುವಂತೆ ಕರಾವಳಿ ಕಾವಲು ಪಡೆ ಸೂಚಿಸಿದೆ. .