ಉಡುಪಿ: ಸಿಎ ಸಿಎಸ್ ಉತ್ತೀರ್ಣರಾದ ತ್ರಿಶಾ ಕ್ಲಾಸಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಉಡುಪಿ: ತ್ರಿಶಾ ಕ್ಲಾಸಸ್ ನಲ್ಲಿ ತರಬೇತಿ ಪಡೆದು ಕಳೆದ ಜೂನ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಿ.ಎ. ಫೈನಲ್, ಸಿ.ಎ. ಇಂಟರ್ ಮಿಡಿಯೆಟ್ ಮತ್ತು ಸಿಎಸ್‍ಇಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಡುಪಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿ.ಎ.ಆದರ್ಶ್ ಶೆಣೈ ಅವರು “ನಿರಂತರ ಅಭ್ಯಾಸ, ಅಧ್ಯಯನ ಮತ್ತು ಪರಿಶ್ರಮದಿಂದ ವಿದ್ಯಾರ್ಥಿಗಳು ಜೀವನದಲ್ಲಿ ಯಶವನ್ನು ಸಾಧಿಸಬಹುದು” ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ […]

ಕೊಡವೂರು: ಮನೆ- ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಕೆ

ಕೊಡವೂರು ವಾರ್ಡಿನಲ್ಲಿ ಮನೆ – ಮನೆಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯ ಮೇ 20 ರಂದು ನಡೆಯಿತು. ಕೊಡವೂರು ವಾರ್ಡಿನಲ್ಲಿ ಅನೇಕ ಸಮಿತಿ ರಚನೆ ಮಾಡಲಾಗಿದ್ದು, ಅದರಲ್ಲಿ ವಿದ್ಯಾರ್ಥಿ ಸಮಿತಿಯೂ ಒಂದಾಗಿದೆ. ವಿದ್ಯಾರ್ಥಿ ಸಮಿತಿಯ ಮುಖಾಂತರ ಅನೇಕ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ನೀಡಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ನಡೆಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೊಡವೂರು ವಾರ್ಡಿಗೆ ಹೆಸರು ತಂದಿರುವ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಗೌರವಿಸುವ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ನಗರ ಸಭಾ […]