71ನೇ ವಿಶ್ವ ಸುಂದರಿ ಸ್ಪರ್ಧೆಯ ಆತಿಥೇಯ ಪ್ರತಿನಿಧಿಯಾಗಿ ಜಗತ್ತನ್ನು ಸ್ವಾಗತಿಸಲಿದ್ದಾರೆ ಸಿನಿಶೆಟ್ಟಿ

ನವದೆಹಲಿ: ಬರೋಬ್ಬರಿ 27 ವರ್ಷಗಳ ಬಳಿಕ 71ನೇ ವಿಶ್ವ ಸುಂದರಿ ಸ್ಪರ್ಧೆಯು ಭಾರತದಲ್ಲಿ ನಡೆಯಲಿದ್ದು, ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ವಿಜೇತೆ ಸಿನಿಶೆಟ್ಟಿ ಆತಿಥೇಯ ಪ್ರತಿನಿಧಿಯಾಗಿದ್ದು ಈ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಈ ಘಳಿಗೆಗೋಸ್ಕರ ತುಂಬಾ ಸಮಯದಿಂದ ಕಾಯುತ್ತಿದ್ದೆ, ನಾನು ಆತಿಥೇಯ ಪ್ರತಿನಿಧಿಯಾಗಿದ್ದು ಜಗತ್ತಿನ ಎಲ್ಲಾ ದೇಶಗಳನ್ನು ಭಾರತಕ್ಕೆ ಸ್ವಾಗತಿಸಲು, ಭಾರತದ ಸಂಸ್ಕೃತಿ, ಆಚಾರ ವಿಚಾರ ಹಾಗೂ ಆಹಾರದ ಪರಿಚಯವನ್ನು ಜಗತ್ತಿಗೆ ಪರಿಚಯಿಸಲು ತುಂಬಾ ಉತ್ಸುಕಳಾಗಿದ್ದೇನೆ ಎಂದು ಸುದ್ದಿಸಂಸ್ಥೆ ಎ.ಎನ್.ಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. […]