ಗ್ರಾಮ ಪಂಚಾಯತ್ ಉಪ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮ ಪಂಚಾಯತ್ ಉಪ ಚುನಾವಣೆಗೆ ಸಂಬಂಧಿಸಿದಂತೆ, ಮೇ 20 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣೆ ನಡೆಯುವ ದಿನದಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಇಂದಿನಿಂದ ದ.ಕ. ಜಿಲ್ಲೆಯಾದ್ಯಂತ ಸಾರ್ವಜನಿಕ ಜಾತ್ರೆ, ಉತ್ಸವ, ಸಭೆ, ಸಮಾರಂಭ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಜಾತ್ರೆ, ಉತ್ಸವ, ಸಭೆ, ಸಮಾರಂಭ ಮುಂತಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕಳೆದ 15 ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮುಂಬರುವ ಹಬ್ಬಗಳಾದ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಂತೆ ಮತ್ತು ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆ/ಮೇಳಗಳನ್ನು ನಡೆಸದಂತೆ ಆದೇಶಿಸಲಾಗಿದೆ […]