ತೆರಿಗೆ ರಿಯಾಯತಿ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಳ: ಏಳು ಆದ್ಯತೆಗಳನ್ನು ಹೊಂದಿರುವ ಸಪ್ತರ್ಷಿ ಬಜೆಟ್
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ತಮ್ಮ ಐದನೇ ಬಜೆಟ್ ಭಾಷಣವನ್ನು ಮಂಡಿಸಿದರು. ಸಚಿವೆಯು ಇದನ್ನು ‘ಅಮೃತ್ ಕಾಲದ ಮೊದಲ ಬಜೆಟ್’ ಮತ್ತು ಭಾರತ @ 100 ರ ನೀಲನಕ್ಷೆ ಎಂದು ಕರೆಯುತ್ತಾ, ಬಜೆಟ್ ಏಳು ಆದ್ಯತೆಗಳನ್ನು ಹೊಂದಿರುತ್ತದೆ ಹಾಗಾಗಿ ಇದು ‘ಸಪ್ತರ್ಷಿ’ ಬಜೆಟ್ ಎಂದು ಅವರು ಹೇಳಿದರು. ಬಜೆಟ್ ಪ್ರಮುಖ ಅಂಶಗಳು ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 5 ಲಕ್ಷದಿಂದ 7 ಲಕ್ಷಕ್ಕೆ ಸರ್ಕಾರ ಹೆಚ್ಚಿಸಿದೆ. ಹೊಸ ತೆರಿಗೆ […]
ಮುಂಬೈ-ರಾಯಚೂರು ರೈಲಿನಲ್ಲಿ ಸಹಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ನಿರ್ಮಲಾ ಸೀತಾರಾಮನ್
ದೇಶದ ವಿತ್ತ ಸಚಿವೆಯಾಗಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಸಾಮಾನ್ಯರಂತೆಯೆ ರೈಲಿನಲ್ಲಿ ಪ್ರಯಾಣಿಸಿದ್ದು, ಮುಂಬೈನಿಂದ ರಾಯಚೂರಿಗೆ ತನ್ನ ರೈಲು ಪ್ರಯಾಣದ ಸಮಯದಲ್ಲಿ ಹಮ್ಮು-ಬಿಮ್ಮುಗಳಿಲ್ಲದೆ ಸಹ-ಪ್ರಯಾಣಿಕರೊಂದಿಗೆ ಸಂವಹನ ನಡೆಸುತ್ತಿರುವುದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರಗಳನ್ನು ನಿರ್ಮಲಾ ಸೀತಾರಾಮನ್ ಅವರ ಕಚೇರಿಯು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.
ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ಉದ್ಘಾಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ: ಇಲ್ಲಿನ ಪೇಜಾವರ ಮಠದ ಅಂಗಸಂಸ್ಥೆಯಾದ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ, ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ಅನ್ನು ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕೆರಂದ್ಲಾಜೆ,ಉಡುಪಿ ಶಾಸಕರಾದ ಕೆ.ರಘುಪತಿ ಭಟ್,ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.