ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆ ತೆರೆಯಲು ಜಿಲ್ಲಾಧಿಕಾರಿ ಸೂಚನೆ
ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು […]
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ; ಹಸಿರು ಪಟಾಕಿಗಳಿಗೆ ಮಾತ್ರ ಪರವಾನಗಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮದುವೆ, ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅತ್ತಿಬೆಲೆ ಪಟಾಕಿ ಮಳಿಗೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳು ಇದ್ದರೆ ಕ್ರಮ ಕೈಗೊಳ್ಳಬೇಕು. ಅನಧಿಕೃತ ಮಳಿಗೆಗಳು ಕಂಡುಬಂದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಪಟಾಕಿ ಅಂಗಡಿಗಳಿಗೆ […]
ನಿಷೇಧ, ದಂಡಕ್ಕೂ ಜಗ್ಗದ ದೆಹಲಿಗರು: ದೀಪಾವಳಿಯಂದು ಪಟಾಕಿ ಸಿಡಿಸಿ ಸಂಭ್ರಮ ಆಚರಣೆ
ದೆಹಲಿ: ದೀಪಾವಳಿಯಂದು ಪಟಾಕಿ ಸಿಡಿಸದಂತೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರವು ಪಟಾಕಿಗಳ ಮೇಲೆ ನಿಷೇಧ ಹೇರಿದ್ದರೂ ದೆಹಲಿಗರು ಮಾತ್ರ ಇದಕ್ಕೆ ಕ್ಯಾರೇ ಅನ್ನದೆ ಪಟಾಕಿ ಸಿಡಿಸಿ ದೀಪಾವಳಿಯ ಸಂಭ್ರಮವನ್ನು ಆಸ್ವಾದಿಸಿದ್ದಾರೆ. ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ₹ 200 ದಂಡ ವಿಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಕಳೆದ ವಾರ ಹೇಳಿದ್ದರು. ಕಾನೂನು ಪ್ರತಿಬಂಧಕ ಜಾರಿಯಲ್ಲಿದ್ದರೂ, ದಕ್ಷಿಣ ಮತ್ತು ವಾಯುವ್ಯ ದೆಹಲಿ ಸೇರಿದಂತೆ ನಗರದ […]