ಬೆಂಗಳೂರಿಗೆ ಬಂತು ಮೊದಲ ಎಲೆಕ್ಟ್ರಿಕ್ ಬಸ್.!
ಬೆಂಗಳೂರು: ರಾಜ್ಯಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರಿಗೆ ಬಂದಿದ್ದು, ಆ ಮೂಲಕ ಬಿಎಂಟಿಸಿಯ ಬಹು ವರ್ಷಗಳ ಕನಸು ನನಸಾಗಿದೆ. ಸಾರಿಗೆ ಸಚಿವ ಶ್ರೀರಾಮುಲು ಮೊದಲ ಎಲೆಕ್ಟ್ರಿಕ್ ಬಸ್ ಅನ್ನು ಅನಾವರಣ ಮಾಡಿದ್ದು, ಕೆಂಗೇರಿ ಡಿಪೋದಲ್ಲಿ ಮೊದಲ ವಿದ್ಯುತ್ ಚಾಲಿತ ಬಸ್ ಅನಾವರಣಗೊಂಡಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್‌ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಮುಂದಾಗಿದೆ. ಜೆಬಿಎಂ ಕಂಪನಿಯಿಂದ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳಲಾಗುತ್ತಿದ್ದು, ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. 34 ಆಸನಗಳ […]